ಪ್ರತಿಯೊಂದು ವಿದ್ಯಾಸಂಸ್ಥೆಯಿಂದ ಸಂಸ್ಕಾರಯುತ ಶಿಕ್ಷಣ ಅತ್ಯಂತ ಅವಶ್ಯಕ.ಶಿಕ್ಷಣ ಎನ್ನುವ ಶಬ್ದಕ್ಕೆ ನಿಜವಾದ ಅರ್ಥವನ್ನು ಕಲ್ಪಿಸಲು ವಿದ್ಯಾಸಂಸ್ಥೆಗಳು ಬೆಳೆಯಬೇಕು. ಯಾವುದೇ ವಸ್ತುವಿನ ಹೊರಗಿನ ಶೃಂಗಾರಕ್ಕೆ ಮಾತ್ರ ಆದ್ಯತೆ ನೀಡದೆ ಅದರ ಗುಣಮಟ್ಟದ ಕಡೆಗೆ ಹೆಚ್ಚು ಗಮನ ಹರಿಸಿದರೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ರವೀಂದ್ರ ಪಿ. ಹೇಳಿದರು.
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪದವಿ ಪೂರ್ವ ವಿದ್ಯಾರ್ಥಿಗಳ ಹೆತ್ತವರ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ಮನುಷ್ಯನ ಒಳಗಡೆ ಇರುವ ರಾಕ್ಷಸ ಗುಣವನ್ನು ಸಾಯಿಸಿ ಅವನಲ್ಲಿರುವ ದೇವರ ಗುಣವನ್ನು ಹೊರಗೆ ತೆಗೆಯಬೇಕು. ಇದು ಶಿಕ್ಷಣದ ಮೂಲ ಉದ್ದೇಶವಾಗಬೇಕು. ಉತ್ತಮ ಶಿಕ್ಷಣದ ಮೂಲಕ ವ್ಯಕ್ತಿಯು ಸಮಾಜಕ್ಕೆ ಉಪಯೋಗವಾಗುವಂತಹ ಬದುಕನ್ನು ರೂಪಿಸಬೇಕು. ಪ್ರತಿಯೊಂದು ವಿದ್ಯಾಸಂಸ್ಥೆಯಿಂದ ಹೊರಗೆ ಕಲಿತು ಹೋಗುವ ವಿದ್ಯಾರ್ಥಿಯು ಸಮಾಜದಲ್ಲಿ ಒಳ್ಳೆಯ ಪ್ರಜೆಯಾಗಿ ರೂಪಿಸಿಕೊಳ್ಳುವ ರೀತಿಯಲ್ಲಿ ತನ್ನ ಜೀವನವನ್ನು ನಡೆಸಬೇಕು. ವಿದ್ಯಾರ್ಥಿಯು ತನ್ನ ಜೀವನದಲ್ಲಿ ತೆಗೆದುಕೊಳ್ಳವ ನಿರ್ಣಯ ಸಮಾಜಕ್ಕೆ ಪೂರಕವಾಗಿರಬೇಕೇ ಹೊರತು ಮಾರಕವಾಗಬಾರದು ಎಂದರು.
ಕಾಲೇಜಿನ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಎಚ್.ಕೆ.ಪ್ರಕಾಶ್ ಪರೀಕ್ಷಾ ತಯಾರಿ ಯೋಜನೆಗಳ ವಿವರ ನೀಡಿದರು.
ಸಮಾರಂಭದಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನಿರ್ದೇಶಕರಾದ ಶ್ರೀ ಟಿ.ಸ್. ಸುಬ್ರಮಣ್ಯ , ಶ್ರೀ ರವಿಕೃಷ್ಣ ಕಲ್ಲಾಜೆ, ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ | ಗೋವಿಂದೇ ಗೌಡ , ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಶ್ಯಾಮಲ, ಪ್ರಾಂಶುಪಾಲರಾದ ಶ್ರೀ ಜೀವನ್‌ದಾಸ್ ಮೊದಲಾದವರು ಉಪಸ್ಥಿತರಿದ್ದರು.
ಆಂಗ್ಲ ವಿಭಾಗದ ಉಪನ್ಯಾಸಕಿ ಶ್ರೀಮತಿ ಮಂಗಳಾ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಾಂಶುಪಾಲರಾದ ಶ್ರೀ ಜೀವನ್‌ದಾಸ್ ಸ್ವಾಗತಿಸಿ, ಉಪನ್ಯಾಸಕಿ ಅಕ್ಷತಾ ವಂದಿಸಿದರು.