ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧಿಸಲು ನಾವೆಲ್ಲರೂ ಸಮಾಜಮುಖಿಗಳಾಗಿ ಸಮಾಜಕ್ಕೆ ಒಳಿತಾಗುವ ಕಾರ್ಯಗಳನ್ನು ಕೈಗೊಳ್ಳಬೇಕು. ಈ ಮೂಲಕ ಗುರಿಯನ್ನು ಸಾಧಿಸುವಲ್ಲಿ ಪ್ರಯತ್ನಶೀಲರಾಗಬೇಕು ಎಂದು ಪೂತ್ತೂರಿನ ನೆಲ್ಲಿಕಟ್ಟೆಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಪ್ರಾದ್ಯಾಪಕರಾದ ಡಾ| ಶ್ರೀಧರ್ ಹೇಳಿದರು.
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಲಾ ಸಂಘದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ಒಬ್ಬ ಕಲಾವಿಭಾಗದ ವಿದ್ಯಾರ್ಥಿ ಸಮಾಜಕ್ಕೆ ಹೆಚ್ಚು ಹತ್ತಿರವಾಗಿರುತ್ತಾನೆ. ಸಮಾಜದಲ್ಲಿ ನಡೆಯುವ ವಿದ್ಯಾಮಾನಗಳ ಬಗ್ಗೆ ಜ್ಞಾನವಿದ್ದಾಗ ಆಧುನಿಕ ಜಗತ್ತಿನಲ್ಲಿ ಅರ್ಥಪೂರ್ಣವಾಗಿ ಬದುಕಲು ಸಾಧ್ಯ ಎಂದರು.
ಪ್ರಾಂಶುಪಾಲರಾದ ಶ್ರೀ ಜೀವನ್ದಾಸ್ ಮಾತನಾಡಿ ನಮ್ಮ ಪರಿಸರವನ್ನು ಶುಚಿಯಾಗಿಟ್ಟುಕೊಂಡು ಸ್ವಚ್ಛತೆಗೆ ಆದ್ಯತೆಯನ್ನು ನೀಡುವಲ್ಲಿ ಪ್ರತಿಯೊಬ್ಬರು ಕಾರ್ಯಪ್ರವೃತರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಯಶವಂತಿ, ಉಪನ್ಯಾಸಕಿ ಕುಮಾರಿ ಮೋನಿಷಾ ಉಪಸ್ಥಿತರಿದ್ದರು.
ಸಂಘದ ವತಿಯಿಂದ ನಡೆಸಲಾದ ಹಲವು ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು.
ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಸುಮ್ಯ ನಿರೂಪಿಸಿದರು.ವಿದ್ಯಾರ್ಥಿನಿ ವಕಾನಿ ಸ್ವಾಗತಿಸಿ ಜಯಶ್ರೀ ವಂದಿಸಿದರು.